ಭಾರತ, ಫೆಬ್ರವರಿ 14 -- ಮೈಸೂರು : ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮತ್ತೊಂದು ಭೂ ಹಗರಣ ಆರೋಪ ಕೇಳಿಬಂದಿದೆ. ಕೆಸರೆ, ಆಲನಹಳ್ಳಿ ಆಗಿ ಇದೀಗ ದಟ್ಟಗಳ್ಳಿ ಬಡಾವಣೆಯಲ್ಲಿ ಅಕ್ರಮ ನಿವೇಶನ ಪಡೆದು ಬೇರೆಯವರಿಗೆ ಮಾರಾಟ ಮಾಡಿದ ಆರೋಪ ವ್ಯಕ್ತವಾಗಿದೆ. ಈ ಸಂಬಂಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ಮತ್ತೊಂದು ದೂರು ನೀಡಿದ್ದಾರೆ.

ಮನವಿ ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ 50:50 ಹಗರಣ ವಿಚಾರವಾಗಿ ಲೋಕಾಯುಕ್ತದಲ್ಲಿ ನಾನು ಪ್ರಕರಣ ದಾಖಲಿಸಿದ್ದೆ. ಎಲ್ಲ 50:50 ಅನುಪಾತದ ಸೈಟುಗಳ ಬಗ್ಗೆ ತನಿಖೆ ಮಾಡುವಂತೆ ಮನವಿ ಪತ್ರ ಕೊಟ್ಟಿದ್ದೆ. ಆದರೆ ಲೋಕಾಯುಕ್ತದವರು ಕೇವಲ ಸಿದ್ದರಾಮಯ್ಯ ಕುಟಂಬದ 14 ಸೈಟುಗಳ ಬಗ್ಗೆ ಮಾತ್ರ ತನಿಖೆ ಮಾಡಿದ್ದಾರೆ. ಇತರ ಆರೋಪಿಗಳು ತಪ್ಪಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ದಟ್ಟಗಳ್ಳಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 24 ಲಕ್ಷಕ್ಕೆ ಒಂದು ಸೈಟು ಖರೀದಿ ಮಾಡಿ 1 ಕೋಟಿಗೆ ಮಾರಾಟ ಮಾಡಿದ್ದಾರೆ. ಸತ್ಯ...