Bengaluru, ಮೇ 20 -- ಮೈಸೂರು : ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬ ಸದಸ್ಯರ ಮೇಲೆ ಮುಡಾ ಹಗರಣ ಕೇಸ್ ದಾಖಲಾಗಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪರವಾಗಿ ಹೈಕೋರ್ಟ್ನಲ್ಲಿ ವಾದ ಮಾಡಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಶುಲ್ಕದ ವಿವರ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ವಕೀಲ ಕಪಿಲ್ ಸಿಬಲ್ ಅವರಿಗೆ ಕೊಟ್ಟ ಹಣ ಎಷ್ಟು? ಯಾವ ರೂಪದಲ್ಲಿ ಕಪಿಲ್ ಸಿಬಲ್ ಅವರಿಗೆ ಹಣ ನೀಡಲಾಗಿದೆ? ಎಂಬ ಮಾಹಿತಿ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಕೋರಿದ್ದಾರೆ. ಸಿಎಂ ಸಿದ್ದರಾಮಯ್ಯ ಪರ ವಕಾಲತ್ತು ನಡೆಸಲು 1.49 ಕೋಟಿ ರೂ. ಶುಲ್ಕವನ್ನು ಭರಿಸುವಂತೆ ಕಪಿಲ್ ಸಿಬಲ್ ಮನವಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ ದಾಖಲೆ ಸಮೇತ ಎಲ್ಲಾ ಮಾಹಿತಿ ಕೊಡಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದಾರೆ.
ಒಂದು ತಿಂಗಳ ಒಳಗೆ ಎಲ್ಲಾ ಮಾಹಿತಿಯನ್ನು ನೀಡಬೇಕು. ಇಲ್ಲದಿದ್ದರೆ ಹೈಕೋರ್ಟ್ನಲ್ಲಿ ಈ ಸಂಬಂಧ ದಾವೆಯನ್ನು ಹೂಡುತ್ತೇನೆ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.