ಭಾರತ, ಫೆಬ್ರವರಿ 19 -- ಬೆಂಗಳೂರು: ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಮಾಡಲು ರಾಜ್ಯ ಹೈಕೋರ್ಟ್ (Karnataka High Court) ನಿರಾಕರಿಸಿರುವ ವಿರುದ್ಧ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿಂದು (Supreme Court) (ಫೆಬ್ರವರಿ 19, ಸೋಮವಾರ) ನಡೆಯಲಿದೆ.

ನ್ಯಾಯಮೂರ್ತಿಗಳಾದ ಹೃಷಿಕೇಸ್ ರಾಯ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ದ್ವಿಸದಸ್ಯ ಪೀಠ ಕಾಂಗ್ರೆಸ್ ನಾಯಕರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವಿಯನ್ನ ಆಲಿಸುವ ಸಾಧ್ಯತೆ ಇದೆ.

2022ರ ಮೆರವಣಿಗೆಗೆ ಸಂಬಂಧಿಸಿದ ಪ್ರಕರಣ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ 2024ರ ಫೆಬ್ರವರಿ 6 ರಂದು ಸಿಎಂ ಸಿದ್ದರಾಮಯ್ಯ, ಸಚಿವರಾದ ಎಂಬಿ ಪಾಟೀಲ್, ರಾಲಿಂಗಾ ರೆಡ್ಡಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರಿಗೆ 10 ಸಾವಿರ ದಂಡ ವಿಧಿಸಿತ್ತು. ಅಲ್ಲದೆ, ಎಫ್‌ಐಆರ್ ರದ್ದು ಮ...