Bengaluru, ಏಪ್ರಿಲ್ 27 -- ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದನಾ ದಾಳಿಗೆ 28 ಪ್ರವಾಸಿಗರು ಬಲಿಯಾದ ಘಟನೆಗೆ ಸಂಬಂಧಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ದೇಶ ವಿದೇಶಗಳಲ್ಲಿ ಚರ್ಚೆಗೆ ಗ್ರಾಸವೊದಗಿಸಿದೆ. ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ತಾನದ ಮಾಧ್ಯಮಗಳಲ್ಲಿ ಪದೇ ಪದೇ ಬಿತ್ತರಿಸಲಾಗುತ್ತಿದೆ. ಈ ಕಾರಣಕ್ಕಾಗಿ ಅವರು ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದ್ದು ಸಿದ್ದರಾಮಯ್ಯ ಅವರ ಮೇಲೆ ಮುಗಿ ಬಿದ್ದಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಏನೆಂದು ನೋಡೋಣ.

ಮೈಸೂರಿನಲ್ಲಿ ಪಹಲ್ಗಾಮ್ ದಾಳಿ ಕುರಿತು ಸಿದ್ದರಾಮಯ್ಯ ಅವರು ಪಾಕಿಸ್ತಾನದ ಮೇಲೆ ಯುದ್ಧ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ನಾವು ಯುದ್ಧದ ಪರ ಇಲ್ಲ. ಬದಲಾಗಿ ಶಾಂತಿ ನೆಲಸುವಂತೆ ಮಾಡಲು ಭದ್ರತಾ ಕ್ರಮಗಳನ್ನು ಹೆಚ್ಚಿಸಬೇಕು ಎಂದು ಹೇಳಿಕೆ ನೀಡಿದ್ದರು. ಪಾಕಿಸ್ತಾನದ ಮೇಲೆ ಭ...