Bangalore, ಮಾರ್ಚ್ 29 -- ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್​ನಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಮಾರ್ಚ್ 28ರ ಶುಕ್ರವಾರ ರಾತ್ರಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ರಜತ್ ಪಾಟೀದಾರ್ ನೇತೃತ್ವದ ಆರ್​ಸಿಬಿ ದಾಖಲೆಯ 50 ರನ್​ಗಳ ಅಂತರದಿಂದ ಗೆದ್ದು ಬೀಗಿದೆ. ಇದು ಚೆಪಾಕ್​ನಲ್ಲಿ 17 ವರ್ಷಗಳ ನಂತರ ದಾಖಲಿಸಿದ ಮೊದಲ ಗೆಲುವು. ಅಂದರೆ ಚಿದಂಬರಂ ಮೈದಾನದಲ್ಲಿ 6155 ದಿನಗಳ ನಂತರದ ಜಯ.

17 ವರ್ಷಗಳ ಸುದೀರ್ಘ ಅಂತರದ ನಂತರ ಬೆಂಗಳೂರು ಚೆಪಾಕ್ ಕೋಟೆ ಭೇದಿಸುವಲ್ಲಿ ಯಶಸ್ವಿಯಾಗಿದೆ. ತಂಡದ ಈ ಗೆಲುವಿನ ನಂತರ, ಸ್ಟಾರ್ ಆಟಗಾರ ವಿರಾಟ್ ಉತ್ಸಾಹ ಉತ್ತುಂಗದಲ್ಲಿತ್ತು. ಸಿಕ್ಕಾಪಟ್ಟೆ ಖುಷಿಯಲ್ಲಿದ್ದ ಕಿಂಗ್ ಕೊಹ್ಲಿ, ಡ್ರೆಸ್ಸಿಂಗ್​ ರೂಮ್​ನಲ್ಲಿ ಡ್ಯಾನ್ಸ್​ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೇಳೆ ಕೆಲವು ಅದ್ಭುತ ಸ್ಟೆಪ್ಸ್ ಹಾಕಿದ್ದಾರೆ. ಈ ವಿಡಿಯ...