ಭಾರತ, ಏಪ್ರಿಲ್ 11 -- ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ವೇಳೆ ಮೊಣಕೈ ಮೂಳೆ ಮುರಿತದಿಂದಾಗಿ ಸಿಎಸ್‌ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್, ಐಪಿಎಲ್ 2025ರ ಆವೃತ್ತಿಯ ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಇಂದಿನಿಂದ (ಏಪ್ರಿಲ್ 11) ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉಳಿದ ಪಂದ್ಯಗಳಲ್ಲಿ ಸಿಎಸ್‌ಕೆ ತಂಡದ ಮಾಜಿ ನಾಯಕ ಎಂಎಸ್‌ ಧೋನಿ ತಂಡವನ್ನು ಮುನ್ನಡೆಸಲಿದ್ದಾರೆ. ಪ್ರಸಕ್ತ ಆವೃತ್ತಿಯಲ್ಲಿ ಯೆಲ್ಲೋ ಆರ್ಮಿ ಸತತ ನಾಲ್ಕು ಪಂದ್ಯಗಳಲ್ಲಿ ಸೋತು ಸಂಕಷ್ಟ ಅನುಭವಿಸಿದೆ. ಇದರ ನಡುವೆ ನಾಯಕನ ನಿರ್ಗಮನ ಅಭಿಮಾನಿಗಳಿಗೆ ಬೇಸರವಾಗಿದೆ. ಇದೇ ವೇಳೆ ರುತುರಾಜ್ ಗಾಯಕ್ವಾಡ್ ಅವರ ಭರವಸೆ ಭಗ್ನಗೊಂಡಿವೆ.

ಒಂದೆಡೆ ತಂಡವು ಸತತ ನಾಲ್ಕು ಸೋಲಿನಿಂದ ಕಂಗೆಟ್ಟು ಗೆಲುವಿಗಾಗಿ ಹೆಣಗಾಡುತ್ತಿದೆ. ಈ ನಡುವೆ ಗಾಯಕ್ವಾಡ್‌ಗೆ ಗಾಯವು ದೊಡ್ಡ ಹೊಡೆತವಾಗಿ ಪರಿಣಮಿಸಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಗಾಯಕ್ವಾಡ್ ಅಲಭ್ಯತೆ ಕುರಿತ...