ಭಾರತ, ಮಾರ್ಚ್ 28 -- ಐಪಿಎಲ್‌ 2025ರ ಉದ್ಘಾಟನಾ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದ ಆರ್‌ಸಿಬಿ ತಂಡವು, ಟೂರ್ನಿಯಲ್ಲಿ ತನ್ನ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings vs Royal Challengers Bengaluru) ತಂಡವನ್ನು ಎದುರಿಸುತ್ತಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಆರಂಭಿಕ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟೂರ್ನಿಯಲ್ಲಿ ಜಯದ ಆರಂಭ ಪಡೆಯಿತು. ಅತ್ತ ಸಿಎಸ್‌ಕೆ ಕೂಡಾ ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿ, ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿದೆ. ಇಂದಿನ ಪಂದ್ಯವು ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆಯುತ್ತಿದ್ದು, ತವರು ನೆಲದಲ್ಲಿ ತನ್ನ ಪ್ರಾಬಲ್ಯ ಮುಂದುವರೆಸಲು ಸೂಪರ್‌ ಕಿಂಗ್ಸ್‌ ಎದುರು ನೋಡುತ್ತಿದೆ.

ಸಿಎಸ್‌ಕೆಗೆ ತವರಿನಲ್ಲಿ ಇದು ಸತತ ಎರಡನೇ ಪಂದ್ಯ. ಇಲ್ಲಿ ಸ್ಪಿನ್‌ ಬೌಲರ್‌ಗಳು ಪ್ರಾಬಲ್ಯ ಸಾಧಿಸುವುದು ಸಾಮಾನ್ಯ. ಇದೀಗ ಮಹತ್ವದ ಪಂದ...