ಭಾರತ, ಮಾರ್ಚ್ 27 -- ಐಪಿಎಲ್‌ 2025ರ ಆವೃತ್ತಿಯಲ್ಲಿ ಮಾರ್ಚ್‌ 28ರ ಗುರುವಾರ ರೋಚಕ ಪಂದ್ಯ ನಡೆಯಲಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಪ್ರಸಕ್ತ ಆವೃತ್ತಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಸಿಎಸ್‌ಕೆ ತವರು ಮೈದಾನ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, ಸಿಎಸ್‌ಕೆ ತಂಡವು ತವರಿನಲ್ಲಿ ಗೆಲುವಿನ ಓಟ ಮುಂದುವರೆಸುವ ವಿಶ್ವಾಸದಲ್ಲಿದೆ. ಆರ್‌ಸಿಬಿ ಹಾಗೂ ಸಿಎಸ್‌ಕೆ ತಂಡಗಳ ನಡುವಿನ ಪಂದ್ಯವು ಯಾವತ್ತಿಗೂ ರೋಚಕ. ಈ ಬಾರಿಯೂ ರೋಚಕ ಹಣಾಹಣಿಯನ್ನು ನಿರೀಕ್ಷಿಸಲಾಗುತ್ತಿದೆ.

ಉಭಯ ತಂಡಗಳು ಕೂಡಾ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯಗಳಲ್ಲಿ ಗೆದ್ದಿವೆ. ಕೆಕೆಆರ್‌ ವಿರುದ್ಧದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ, ಸಿಎಸ್‌ಕೆ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ ಗೆದ್ದು ಬೀಗಿದೆ. ಇದೀಗ ಐಪಿಎಲ್‌ನಲ್ಲಿ ನಾಳಿನ ಮಹತ್ವದ ಪಂದ್ಯದ 10 ಮುಖ್ಯ ಅಂಶಗಳನ್ನು ನೋಡೋಣ.

ಇದನ್ನೂ ಓದಿ | ಆರ್‌ಸಿಬಿ vs ಸಿಎಸ್‌ಕೆ ಐಪಿಎಲ್‌ ಪಂದ್ಯ; ಚೆಪಾಕ್‌ನಲ್ಲಿ ಸ್ಪ...