ಭಾರತ, ಮೇ 18 -- ಕೇಂದ್ರ ಕೈಗಾರಿಕಾ ಭದ್ರತಾ ಪಡೆ (Central Industrial Security Force -CISF) ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಿಐಎಸ್ಎಫ್‌ನ (cisfrectt.cisf.gov.in) ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಮೂಲಕ ಸಂಸ್ಥೆಯಲ್ಲಿ 403 ಹುದ್ದೆಗಳನ್ನು ಭರ್ತಿ ಮಾಡಲಾತ್ತದೆ. ಹೆಚ್ಚು ಹುದ್ದೆಗಳಿರುವುದರಿಂದ ಆಸಕ್ತರು ಅರ್ಜಿ ಸಲ್ಲಿಸಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಬಹುದು.

ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೋಂದಣಿ ಪ್ರಕ್ರಿಯೆಯು ಇಂದಿನಿಂದ, ಅಂದರೆ ಮೇ 18ರ ಭಾನುವಾರದಂದು ಆರಂಭವಾಗುತ್ತದೆ. ಅರ್ಜಿ ಸಲ್ಲಿಸಲು 2025ರ ಜೂನ್ 6ರಂದು ಕೊನೆಯ ದಿನ. ಹಾಗಿದ್ದರೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಹೇಗಿರುತ್ತವೆ? ವಿವರಗಳಿಗೆ ಇಲ್ಲಿ ಓದಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ...