ಭಾರತ, ಜನವರಿ 31 -- ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್‌ 19 ರಂದು ನಡೆದ ವಿಧಾನ ಪರಿಷತ್‌ ಅಧಿವೇಶನದಲ್ಲಿ ಅಶ್ಲೀಲ ಪದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ವಿರುದ್ಧ ದೂರು ಸಲ್ಲಿಸಿದ್ದು ಪೊಲೀಸರು ಎಫ್​ಐಆರ್‌ ದಾಖಲಿಸಿದ್ದರು. ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ (ಧಾರವಾಡ) ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಗುರುವಾರ (ಜನವರಿ 30) ವಿಚಾರಣೆ ನಡೆಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಕರಣದಲ್ಲಿ ಸಾಕಷ್ಟು ವಿಚಾರಗಳು ಅಡಗಿರುವುದರಿಂದ ಅವುಗಳನ್ನೆಲ್ಲಾ ಸೂಕ್ತ ರೀತಿಯಲ್ಲಿ ಪರಿಶೀಲಿಸಿ ವಿಚಾರಣೆ ನಡೆಸಬೇ...