ಭಾರತ, ಏಪ್ರಿಲ್ 1 -- ತುಮಕೂರು: ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಪ್ರಖ್ಯಾತರಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ 118ನೇ ಜನ್ಮ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀಮಠದಲ್ಲಿ ಮಂಗಳವಾರ (ಮಾ.1)ಸಡಗರ ಸಂಭ್ರಮದಿಂದ ಆಚರಿಸಲಾಯಿತು. 12ನೇ ಶತಮಾನದ ಬಸವಣ್ಣನವರ ತತ್ವಾದರ್ಶಗಳನ್ನು ಚಾಚೂ ತಪ್ಪದೇ ಪಾಲನೆ ಮಾಡುತ್ತಾ ಸಮಾಜದ ಉದ್ಧಾರಕ್ಕೆ ಸದಾ ತುಡಿಯುತ್ತಿದ್ದ ಆಧುನಿಕ ಬಸವಣ್ಣ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತಿಗೆ ವಿವಿಧ ಮಠಾಧೀಶರು, ಹರಗುರುಚರಮೂರ್ತಿಗಳು, ಗಣ್ಯಾತಿ ಗಣ್ಯರು ಹಾಗೂ ಸಹಸ್ರಾರು ಭಕ್ತಗಣ ಸಾಕ್ಷಿಯಾದರು.

ಬೆಳಗ್ಗೆಯಿಂದಲೇ ಶ್ರೀಮಠಕ್ಕೆ ಭಕ್ತರು, ಗಣ್ಯರ ದಂಡು ಹರಿದು ಬಂದಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ...