Mysuru, ಫೆಬ್ರವರಿ 7 -- Mysore Muda Scam: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎನ್ನುವ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದ್ದು. ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗುವುದಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದದ ನಿವೇಶನ ಹಗರಣದ ಕುರಿತು ಕಾನೂನು ಹೋರಾಟ ಮಾಡುತ್ತಿರುವ ಮೈಸೂರಿನ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಹೈಕೋರ್ಟ್‌ನಲ್ಲಿ ಕೊಂಚ ಹಿನ್ನಡೆಯಾದರೂ ನನ್ನ ಕಾನೂನು ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಸಿಎಂ ಸಿದ್ದರಾಮಯ್ಯ ಕುಟುಂಬ ಸದಸ್ಯರ ವಿರುದ್ಧದ ಮತ್ತಷ್ಟು ಭ್ರಷ್ಟಾಚಾರ ಪ್ರಕರಣ ಬಯಲಿಗೆಳೆಯುವುದಾಗಿಯೂ ಕೃಷ್ಣ ಪ್ರಕಟಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ ತೀರ್ಪಿನ ಬಳಿಕ ಮೈಸೂರಿನಲ್ಲಿ ಕೃಷ್ಣ ವಿವರವಾಗಿ ಮಾತನಾಡಿದ್ದಾರೆ.

ಮುಡಾ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ ಹೈಕೋರ್ಟ್ ಮೊರೆ ಹೋಗಿದ್ದೆ. ಏಕೆಂದರೆ ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ನಡೆದಿಲ್ಲ. ಹಾಗಾಗಿ ಮುಡಾ ಅಕ್ರಮಗಳ ‌ಪ್ರಕ...