Bangalore, ಮಾರ್ಚ್ 7 -- Karnataka Budget 2025: ಕರ್ನಾಟಕ ಬಜೆಟ್‌ 2025ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋಪಾಲಕೃಷ್ಣ ಅಡಿಗರ 'ಕಟ್ಟುವೆವು ನಾವು' ಕವನದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರು ತನ್ನ 16ನೇ ಬಜೆಟ್‌ನಲ್ಲಿ ಸಾಹಿತ್ಯದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಸಿಎಂ ಹೇಳಿದ್ದಾರೆ. ತನ್ನ ಬಜೆಟ್‌ ಭಾಷಣದಲ್ಲಿ "ಇರುವೆಲ್ಲವನು ಎಲ್ಲ ಜನಕೆ ತೆರವಾಗಿಸುವ ಸಮಬಗೆಯ ಸಮಸುಖದ ಸಮದುಃಖದ, ಸಾಮರಸ್ಯದ ಸಾಮಗಾನ ಲಹರಿಯ ಮೇಲೆ, ತೇಲಿ ಬರಲಿದೆ ನೋಡು, ನಮ್ಮ ನಾಡು" ಎಂಬ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಎಂ. ಗೋಪಾಲಕೃಷ್ಣ ಆಡಿಗ ಅವರ 'ಕಟ್ಟುವೆವು ನಾವು' ಕವನದ ಪೂರ...