Bengaluru, ಫೆಬ್ರವರಿ 10 -- ‌Sidlingu 2: ನಟ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್‍ ನಿರ್ದೇಶನದ ಬಹುನಿರೀಕ್ಷಿತ 'ಸಿದ್ಲಿಂಗು 2' ಚಿತ್ರ ಇನ್ನೇನು ಫೆಬ್ರವರಿ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿಂದಿನ ಸಿದ್ಲಿಂಗು ಸಿನಿಮಾದ ಯಶಸ್ಸಿನ ಬಳಿಕ ಇದೀಗ ಅದೇ ಚಿತ್ರದ ಮುಂದುವರಿದ ಭಾಗವಾಗಿ ಸಿದ್ಲಿಂಗು 2 ಬರುತ್ತಿದೆ. ಇದೇ ಚಿತ್ರದ ಪ್ರೀ- ರಿಲೀಸ್‍ ಇವೆಂಟ್‍ ಭಾನುವಾರ ನಡೆದಿದೆ. ಈ ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, 'ದುನಿಯಾ' ವಿಜಯ್‍ ಆಗಮಿಸಿ 'ಚುರುಮುರಿ' ಎಂಬ ಹಾಡು ಬಿಡುಗಡೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕುಮಾರ್, 'ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದರು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು 'ಸಿಲ್ಲಿ ಲಲ್ಲಿ' ನೋಡುವಂತೆ ಮಾಡಿದರು. ಈಗ ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ. ಹೊಡಿ- ಬಡಿ ಸಿನಿಮಾಗಳ ಮಧ್ಯೆ ಒಳ್ಳೆಯ ಸಿನಿಮಾ ಬರುತ್ತಿದೆ ಎಂಬುದರ ಸೂಚನೆ ಇಲ್ಲಿದೆ. ಯೋಗಿಗೆ ...