Bengaluru, ಮೇ 15 -- ಸ್ಯಾಂಡಲ್‌ವುಡ್‌ನಲ್ಲಿ ʻಯು ಟರ್ನ್ 2ʼ ಸಿನಿಮಾ ಮೂಲಕ ಗುರುತಿಸಿಕೊಂಡ ಚಂದ್ರು ಓಬಯ್ಯ ಅವರೀಗ ಒಂದರ ಮೇಲೊಂದರಂತೆ ಸಿನಿಮಾಗಳನ್ನು ಆರಂಭಿಸಿದ್ದಾರೆ. ಕೆಲವನ್ನು ಬಿಡುಗಡೆ ಹಂತಕ್ಕೂ ತಂದಿದ್ದಾರೆ. ಅದರಲ್ಲಿ ʻಕರಿಮಣಿ ಮಾಲಿಕ ನೀನಲ್ಲʼ ಸಿನಿಮಾ ಕೂಡ ಒಂದು. ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರವೀಗ ಪೋಸ್ಟ್ ಪ್ರೊಡಕ್ಷನ್ ಕೊನೇ ಹಂತದಲ್ಲಿದೆ. ಚಂದ್ರು ಓಬಯ್ಯ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಹೀಗಿರುವ ಇದೇ ಚಿತ್ರದ ಟೀಸರ್‌ ಇದೀಗ ಬಿಡುಗಡೆ ಆಗಿದೆ.

ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿರುವ ಮಾರುತಿ ಈ ಚಿತ್ರದ ನಾಯಕನಾಗಿದ್ದು, ರಮಿಕ ಸುತಾರ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಕ್ರೋಚ್ ಸುಧಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೀಸರ್‌ ಅನ್ನು ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ ಹಾಗೂ ಅಂಜಿನಪ್ಪ ಬಿಡುಗಡೆ ಮಾಡಿದರು. ಮುಖ್ಯ ಅತಿಥಿಗಳಾಗಿ ಟಿ.ಎನ್.ನಾಗೇಶ್, ಶ್ರೀನಿವಾಸ್ ಭಾಗವಹಿಸಿದ್ದರು.

ಇದನ್ನೂ ಓದಿ: ʻನಿಮ್ಮ ವಿಡಿಯೋ ಇ...