ಭಾರತ, ಮೇ 13 -- ಸಿಬಿಎಸ್‌ಇ ಫಲಿತಾಂಶ 2025; ಪ್ರಸಕ್ತ ವರ್ಷದ ಸಿಬಿಎಸ್‌ಇ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರು ಬಹಳ ಕಾತರದಿಂದ ಕಾಯುತ್ತಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ತನ್ನ 10ನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶವನ್ನು ಶೀಘ್ರವೇ ಅಂದರೆ ಇದೇ ವಾರ ಪ್ರಕಟಿಸುವ ಸಾಧ್ಯತೆ ಇದೆ. 10ನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶಗಳನ್ನು ಒಟ್ಟಿಗೆ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಬಿಎಸ್‌ಇ ಫಲಿತಾಂಶ 2025 ಪ್ರಕಟವಾದ ಕೂಡಲೇ ಸಿಬಿಎಸ್‌ಇ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ, ಡಿಜಿಲಾಕರ್‌ ಪೋರ್ಟಲ್, ಉಮಂಗ್ ಆ್ಯಪ್‌‌ನಲ್ಲಿ ಕೂಡ ಲಭ್ಯವಾಗಲಿದೆ. ಇದಲ್ಲದೆ, ಬೋರ್ಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅವರ ಸಿಬಿಎಸ್‌ಇ ಬೋರ್ಡ್‌ ಪರೀಕ್ಷೆ 2025ರ ಫಲಿತಾಂಶವನ್ನು ಎಸ್‌ಎಂಎಸ್ ಮೂಲಕ ಮತ್ತು ಐವಿಆರ್‌ಎಸ್‌ ಕರೆಗಳ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ತನ್ನ 10ನೇ ತರಗತಿ ಹಾಗೂ 1...