ಭಾರತ, ಮೇ 9 -- ಸಿಬಿಎಸ್‌ಇ 10ನೇ ತರಗತಿ ಮತ್ತು 12ನೇ ತರಗತಿಯ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ. ಫಲಿತಾಂಶ ಪ್ರಕಟವಾಗುವ ದಿನಾಂಕವನ್ನು ಕೇಂದ್ರೀಯ ಮಾಧ್ಯಮ ಶಿಕ್ಷಣ ಮಂಡಳಿ ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಸೋಷಿಯಲ್ ಮೀಡಿಯಾದಲ್ಲಿ ದಿನಾಂಕಗಳನ್ನು ತಪ್ಪಾಗಿ ಹೇಳಿಕೊಂಡು ಪೋಸ್ಟ್‌ಗಳನ್ನು ವೈರಲ್ ಮಾಡಲಾಗುತ್ತಿದೆ. ಈ ಬಗ್ಗೆ ಸಿಬಿಎಸ್‌ಇ ಸ್ಪಷ್ಟನೆ ನೀಡಿದ್ದು, ದಿನಾಂಕಗಳ ಕುರಿತ ಸುತ್ತೋಲೆ ಸುಳ್ಳು ಎಂದು ಹೇಳಿದೆ. ಈ ತಪ್ಪು ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡುತ್ತಿದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.
ಫಲಿತಾಂಶವು ಒಟ್ಟು ನಾಲ್ಕು ಹಂತಗಳಲ್ಲಿ ಮೇ 9, 13, 14 ಮತ್ತು 16ರಂದು ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು CBSE ಫಲಿತಾಂಶ ಪೋರ್ಟಲ್, ಡಿಜಿಲಾಕರ್, ಉಮಾಂಗ್ ಮತ್ತು ಇತರ ಆನ್‌ಲೈನ್ ತಾಣಗಳ ಮೂಲಕ ಡೌನ್‌ಲೋಡ್ ಮಾಡಬಹುದು ಎಂದು ಈ ನಕಲಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದು ಸತ್ಯಕ್ಕೆ ದೂರವಾದ ಪೋಸ್ಟ್.
46 ಲಕ್ಷ ವಿದ್ಯಾರ್ಥಿಗಳು ಸಿಬಿಎಸ್‌ಇ 2025ರ ಪರೀಕ್ಷೆಗಳಿಗೆ ಹಾಜ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.