Bengaluru, ಮೇ 2 -- ರಾಜ್ಯದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗುವ ಬಗ್ಗೆ ಮಂಡಳಿ ದೃಢಪಡಿಸಿದ ಬೆನ್ನಲ್ಲೇ ಸಿಬಿಎಸ್‌ಇ, 10 ಮತ್ತು 12ನೇ ತರಗತಿಯ ಫಲಿತಾಂಶಗಳನ್ನು ಮೇ 2ರ ಶುಕ್ರವಾರ ಪ್ರಕಟಿಸಲಾಗುವುದಿಲ್ಲ ಎಂದು ಮಂಡಳಿ ದೃಢಪಡಿಸಿದೆ. ಅಧಿಕೃತ ಫಲಿತಾಂಶ ದಿನಾಂಕವನ್ನು ಇನ್ನೂ ಪ್ರಕಟಿಸಲಾಗಿಲ್ಲ ಮತ್ತು ವಿದ್ಯಾರ್ಥಿಗಳು ರಿಸಲ್ಟ್ ಅಪ್‌ಡೇಟ್ ಕುರಿತು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳನ್ನು ಮಾತ್ರ ಗಮನಿಸುವಂತೆ ಸೂಚಿಸಲಾಗಿದ್ದು, ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವದಂತಿಗಳನ್ನು ತಳ್ಳಿಹಾಕಿರುವ ಮಂಡಳಿ, ಅಧಿಕೃತ ವರದಿಗಳನ್ನು ಮಾತ್ರವೇ ಗಮನಿಸುವಂತೆ ವಿದ್ಯಾರ್ಥಿಗಳಿಗೆ ಹೇಳಿದೆ.

ವೈರಲ್ ಆಗಿರುವ ಸಾಮಾಜಿಕ ಮಾಧ್ಯಮ ಹೇಳಿಕೆಗಳು ಮತ್ತು ಇತರ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ, ಸಿಬಿಎಸ್‌ಇ ಮಂಡಳಿಯು ಶನಿವಾರ 10 ಮತ್ತು 12ನೇ ತರಗತಿಯ ಫಲಿತಾಂಶಗಳನ್ನು ಬಿಡುಗಡೆ ಮಾಡುವುದಿಲ್ಲ. ಫಲಿತಾಂಶ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ ಮತ್ತು ಇ ಪ್ರಕಟವಾಗುವ ಫಲಿತಾಂಶಗಳ ಬಗ್ಗೆ ಯಾವುದೇ ಅಧಿಕೃತ ಘೋ...