Bengaluru, ಮಾರ್ಚ್ 31 -- Padmagandhi Movie: ಸ್ಯಾಂಡಲ್‌ವುಡ್‌ ಹಿರಿಯ ನಟ ಸುಚೇಂದ್ರ ಪ್ರಸಾದ್‌ ನಿರ್ದೇಶನದ ಹೊಸ ಸಿನಿಮಾವೊಂದು ಇದೀಗ ಅಂತಿಮ ಘಟ್ಟದ ಚಿತ್ರೀಕರಣ ಹಂತದಲ್ಲಿದೆ. ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ಮೂಡಿಬರುತ್ತಿರುವ ಚಿತ್ರಕ್ಕೆ ʻಪದ್ಮಗಂಧಿʼ ಎಂಬ ಶೀರ್ಷಿಕೆ ಇಡಲಾಗಿದೆ. ಮಾಜಿ ಎಂಎಲ್‌ಸಿ, ಪ್ರಸಿದ್ಧ ಅಂಕಣಕಾರ್ತಿ, ಸಂಸ್ಕೃತದ ಭೂಮಿಕೆಯಲ್ಲಿ ನಾನಾ ದಿಕ್ಕಿನ ಅಧ್ಯಯನ, ಪಾಂಡಿತ್ಯದ ಮೂಲಕ ಹೆಸರಾಗಿರುವ ಎಸ್ ಆರ್ ಲೀಲಾ ಈ ಚಿತ್ರಕ್ಕೆ ಕಥೆ ಸಿದ್ಧಪಡಿಸಿ ನಿರ್ಮಾಪಕಿಯಾಗಿಯೂ ಜೊತೆಯಾಗಿದ್ದಾರೆ.

ನಮ್ಮಲ್ಲಿ ದೈವೀಕ ಅನುಭೂತಿ ಸ್ಫುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಿಧಿಯನ್ನು ವಿಸ್ತರಿಸಿಕೊಳ್ಳುತ್ತಾ ಸಾಗಿದ್ದ ಲೀಲಾ ಅವರ ಪಾಲಿಗೆ, ಅದರ ಅಗಾಧತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರೆಯಂತೆ ಭಾಸವಾಗಲಾರಂಭಿಸಿತ್ತು. ಕಡೆಗೂ ಕಮಲ ಪುಷ್ಪದ ಬಗ್ಗೆ ನಿರಂತರವಾಗಿ ಆರೇಳು ವರ್ಷ ಅಧ್ಯಯನ ನಡೆಸಿದ್ದ ಅವರು ಕಡೆಗೂ ಅಪರೂಪದ ಕಥೆಯೊಂದನ್ನು ಸಿದ್ಧಪಡಿಸಿ, ನಂತರ ಸುಚೇಂದ್ರ ಪ್ರಸಾದ್ ನಿರ್ದೇಶನದ ಜವಾಬ್ದ...