Bangalore, ಏಪ್ರಿಲ್ 24 -- ಕೆಲವು ತಿಂಗಳ ಹಿಂದೆ ಬಿಡುಗಡೆಯಾದ ಕಿಚ್ಚ ಸುದೀಪ್‌ ನಟನೆಯ ಮ್ಯಾಕ್ಸ್‌ ಸಿನಿಮಾದಲ್ಲಿ ಮತ್ತು ಕನ್ನಡ ಕಿರುತೆರೆಯ ಹಲವು ಸೀರಿಯಲ್‌ಗಳಲ್ಲಿ ನಟಿಸಿದ ನಟ ಶ್ರೀಧರ್‌ಗೆ ಅನಾರೋಗ್ಯ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿಯಾಗಿದೆ. ಇವರು ಆಸ್ಪತ್ರೆಯ ಬೆಡ್‌ ಮೇಲೆ ಮಲಗಿರುವ ಫೋಟೋವೊಂದು ವೈರಲ್‌ ಆಗುತ್ತಿದೆ. ಈ ಫೋಟೋದಲ್ಲಿ ಇವರು ಗುರುತೇ ಸಿಗದಂತೆ ಬದಲಾಗಿದ್ದಾರೆ. ಇವರು ಬೆಂಗಳೂರಿನ ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಟ ಶ್ರೀಧರ್‌ ಅವರು ವಧು ಸೀರಿಯಲ್‌ನಲ್ಲಿ ನಟಿಸುತ್ತಿದ್ದರು. ಪಾರು ಸೀರಿಯಲ್‌ನಲ್ಲಿ ನಾಯಕಿಯ ಚಿಕ್ಕಪ್ಪನ ಪಾತ್ರದಲ್ಲಿ ನಟಿಸುತ್ತಿದ್ದರು. ಅನಾರೋಗ್ಯದ ಕಾರಣದಿಂದ ಸೀರಿಯಲ್‌ನಿಂದ ಹೊರಬಂದಿದ್ದರು. ಇವರು ನಿರ್ವಹಿಸುತ್ತಿದ್ದ ಪಾತ್ರಕ್ಕೆ ಬೇರೆ ನಟನ ಎಂಟ್ರಿಯಾಗಿತ್ತು. ಇದೀಗ ಇವರು ಅನಾರೋಗ್ಯದಲ್ಲಿ ಗುರುತೇ ಸಿಗದಂತೆ ಬದಲಾಗಿರುವ ಫೋಟೋ ಅಭಿಮಾನಿಗಳ‌ ಅಚ್ಚರಿಗೆ ಕಾರಣವಾಗಿದೆ.

ಕಮಲಿ ಸೀರಿಯಲ್‌ನ ನಟಿ ಅಂಕಿತಾ ಅವರು ಇನ್‌ಸ...