ಭಾರತ, ಮಾರ್ಚ್ 9 -- ಸುಧೀರ್ ಬಾಬು ಹಾಗೂ ಸೋನಾಕ್ಷಿ ಸಿನ್ಹಾ ಅಭಿನಯದಲ್ಲಿ ಮೂಡಿ ಬರುತ್ತಿರುವ ಹೊಸ ಸಿನಿಮಾ ಜಟಾಧಾರದಲ್ಲಿ ಸೋನಾಕ್ಷಿ ಸಿನ್ಹಾ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ಭಯಾನಕ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಜಟಾಧಾರ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಚಿತ್ರತಂಡ ಹೊಸ ಪೋಸ್ಟರ್ ಹಂಚಿಕೊಂಡಿದೆ. ಸೋನಾಕ್ಷಿ ಅವರ ಮೊದಲ ನೋಟವನ್ನು ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ.

ಹಿರಮಂಡಿ ಚಿತ್ರದಲ್ಲಿ ಶಕ್ತಿಯುತ ಪಾತ್ರವನ್ನು ನಿರ್ವಹಿಸಿದ ನಂತರ ಸೋನಾಕ್ಷಿ ಮತ್ತೊಂದು ಹೊಸ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಸೋನಾಕ್ಷಿ ಸಿನ್ಹಾ ಪುರಾಣ, ಆಕ್ಷನ್ ಮತ್ತು ಅಲೌಕಿಕ ಅಂಶಗಳನ್ನು ಒಳಗೊಂಡಿರುವ ಪ್ಯಾನ್ಇಂ ಡಿಯಾ ಚಿತ್ರ ಜಟಾಧಾರದಲ್ಲಿ ಪ್ರೇಕ್ಷಕರನ್ನು ಮೆಚ್ಚಿಸಲು ಸಜ್ಜಾಗಿದ್ದಾರೆ. ಜಟಾಧಾರ ಚಿತ್ರದಲ್ಲಿ ಸೋನಾಕ್ಷಿ ಸಿನ್ಹಾ ಅವರ ಫಸ್ಟ್ ಲುಕ್ ಪೋಸ್ಟರ್ ಚಂದ್ರಮುಖಿಯನ್ನು ಹೋಲ...