ಭಾರತ, ಮೇ 18 -- ಸುಪ್ರೀಂಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿ (CJI) ಆಗಿ ಭೂಷಣ್ ರಾಮಕೃಷ್ಣ ಗವಾಯಿ ಮೇ 14 ರಂದು ಪ್ರಮಾಣ ವಚನ ಸ್ವೀಕರಿಸಿದ್ದು, ಭಾರತೀಯ ನ್ಯಾಯಾಂಗದ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ ಎರಡನೇ ದಲಿತ ವ್ಯಕ್ತಿಯಾಗಿದ್ದಾರೆ.
ಕಳೆದ ವರ್ಷ ಭಾಷಣವೊಂದರಲ್ಲಿ ಡಾ ಬಿಆರ್ ಅಂಬೇಡ್ಕರ್ ಅವರ ಪ್ರಯತ್ನದಿಂದಲೇ ನನಗೆ ಈ ಸ್ಥಾನ ಸಿಗಲು ಸಾಧ್ಯವಾಯಿತು, ನಾನು ಕೊಳಚೆ ಪ್ರದೇಶದಲ್ಲಿರುವ ಮುನ್ಸಿಪಲ್ ಶಾಲೆಯಲ್ಲಿ ಓದಿದವನು ಎಂದು ಅವರು ಹೇಳಿದ್ದರು. ತಮ್ಮ ಭಾಷಣವನ್ನು ಅವರು ಜೈ ಭೀಮ್ ಘೋಷಣೆಯಿಂದಲೇ ಮುಕ್ತಾಯ ಮಾಡಿದ್ದರು.
ಅಂದಹಾಗೆ, ನ್ಯಾಯಮೂರ್ತಿ ಗವಾಯಿ ಅವರ ಕುಟುಂಬ ಕಾಂಗ್ರೆಸ್ ಪಕ್ಷದೊಂದಿಗೆ ಸಂಬಂಧ ಹೊಂದಿದೆ. ಇದನ್ನು ಅವರು ಬಹಿರಂಗವಾಗಿ ಒಪ್ಪಿಕೊಂಡಿದ್ದರು.
ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆ ನೀಡದಿರುವ ಗುಜರಾತ್ ಹೈಕೋರ್ಟ್‌ನ ನಿರ್ಧಾರಕ್ಕೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿಯಲು ನ್ಯಾಯಮೂರ್ತಿ ಗವಾಯಿ ಮುಂದಾಗಿದ್ದರು.
'ನನ್ನ ತಂದೆಗೆ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.