ಭಾರತ, ಏಪ್ರಿಲ್ 16 -- ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯ ಹಲವಾರು ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ಏಪ್ರಿಲ್ 16ರಂದು ವಿಚಾರಣೆ ನಡೆಸಲಿದೆ. ತಿದ್ದುಪಡಿ ಮಾಡಲಾದ ಕಾನೂನು ಹಲವಾರು ರಾಜಕೀಯ ಮುಖಂಡರು, ಧಾರ್ಮಿಕ ಸಂಸ್ಥೆಗಳು ಮತ್ತು ನಾಗರಿಕ ಹಕ್ಕುಗಳ ಗುಂಪುಗಳಿಂದ ಟೀಕೆಗೆ ಗುರಿಯಾಗಿದೆ. ತಿದ್ದುಪಡಿಯು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎನ್ನುತ್ತಿದ್ದಾರೆ. ವಕ್ಫ್ ಆಸ್ತಿಗಳ ಸ್ವರೂಪವನ್ನು ಈ ತಿದ್ದುಪಡಿಯು ಬದಲಾಯಿಸುತ್ತದೆ ಎಂದು ವಾದಿಸುತ್ತಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಏಪ್ರಿಲ್ 16 ರಂದು ಸುಮಾರು 10 ಅರ್ಜಿಗಳನ್ನು ಕೈಗೆತ್ತಿಕೊಳ್ಳಲಿದೆ. ಅರ್ಜಿದಾರರಲ್ಲಿ ಲೋಕಸಭೆ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ದೆಹಲಿ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್, ನಾಗರಿಕ ಹಕ...