Bengaluru, ಮಾರ್ಚ್ 19 -- Suthradaari Movie: ಸಂಗೀತ ನಿರ್ದೇಶಕ, ಗಾಯಕ ಚಂದನ್‌ ಶೆಟ್ಟಿ ನಾಯಕ ನಟನಾಗಿ ನಟಿಸಿದ ಸಿನಿಮಾ ಸೂತ್ರಧಾರಿ. ಇದೀಗ ಈ ಸಿನಿಮಾ ಎಲ್ಲ ಕೆಲಸಗಳನ್ನು ಮುಗಿಸಿಕೊಂಡು, ಬಿಡುಗಡೆಯ ಹಂತಕ್ಕೆ ಬಂದಿದೆ. ಒಂದಷ್ಟು ವಿಚಾರಕ್ಕೆ ಕುತೂಹಲ ಮೂಡಿಸಿರುವ ಈ ಸಿನಿಮಾ ಮೇ 9ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾ ರಿಲೀಸ್‌ ದಿನಾಂಕವನ್ನು ಹೇಳಲೆಂದೇ ಮಾಧ್ಯಮದ ಮುಂದೆ ಬಂದಿತ್ತು ಇಡೀ ತಂಡ. ಇದೇ ವೇಳೆ, ಸೂತ್ರಧಾರಿ ಸಿನಿಮಾ ಒಪ್ಪಿಕೊಂಡ ಬಳಿಕ ನನ್ನ ಜೀವನದಲ್ಲಿಯೂ ಸಾಕಷ್ಟು ಬದಲಾವಣೆಗಳು ಆಗಿವೆ ಎಂದಿದ್ದಾರೆ.

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಚಿತ್ರರಂಗದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ನವರಸನ್, ಇದೀಗ ಸೂತ್ರಧಾರಿ ಸಿನಿಮಾ ಮೂಲಕ ಆಗಮಿಸಿದ್ದಾರೆ. ಕಿರಣ್ ಕುಮಾರ್ ಚೊಚ್ಚಲ ನಿರ್ದೇಶನದ ಈ ಸಿನಿಮಾದಲ್ಲಿ ಚಂದನ್‌ ಶೆಟ್ಟಿ ನಾಯಕನಾಗಿ ನಟಿಸಿದರೆ, ಸಂಜನಾ ಆನಂದ್‌ ಮತ್ತು ಅಪೂರ್ವ ನಾಯಕಿಯರಾಗಿ ನಟಿಸಿದ್ದಾರೆ. ಚೇತನ್ ಗೌಡ, ಮುನೇಗೌಡ ಹಾಗೂ ರಾಜೇಶ್ ಸೂತ್ರಧಾರಿ ಚಿತ್ರದ ಬಿಡುಗಡೆ ದಿನಾಂಕ ಅನ...