ಭಾರತ, ಏಪ್ರಿಲ್ 30 -- ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರ ಪಿಆರ್‌ಕೆ, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ ಕೆಆರ್‌ಜಿ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್‌ ಬ್ಯಾನರ್‌ನಡಿ ಎಕ್ಕ ಸಿನಿಮಾ ಅದ್ಧೂರಿಯಾಗಿ ತಯಾರಾಗುತ್ತಿದೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಈ ಪ್ರೊಡಕ್ಷನ್ಸ್‌ ನಡಿ ಹೊಸ ಸಿನಿಮಾ ಘೋಷಣೆಯಾಗಿದೆ.

ಬಹಳ ದಿನಗಳಿಂದ ಕೇಳಿ ಬರ್ತಿದ್ದ ಯುವ ರಾಜ್‌ಕುಮಾರ್‌ ಹಾಗೂ ಸುಕ್ಕ ಸೂರಿ ಸಿನಿಮಾಗೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ಅಕ್ಷಯ ತೃತೀಯದಿನವಾದ ಇಂದು ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ.

ಸ್ಯಾಂಡಲ್‌ವುಡ್‌ ಸಲಗ ದುನಿಯಾ ವಿಜಯ್‌ಕುಮಾರ್‌ ಕ್ಲ್ಯಾಪ್‌ ಮಾಡಿದ್ದು, ಅಪ್ಪು ಅವರ ಮಗಳು ಧೃತಿ ಪುನೀತ್ ರಾಜ್ಕುಮಾರ್ ಕ್ಯಾಮೆರಾ ಚಾಲನೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯುವ ಫ್ಯಾಮಿಲಿ, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಕಾರ್ತಿಕ್‌ ಗೌಡ, ಯೋಗಿ ಜಿ ರಾಜ್‌, ನಿರ್ದೇಶಕ ಸೂರಿ ಸೇರಿದಂತೆ ಇಡೀ ಚಿತ್ರತಂಡ ಉಪಸ್ಥಿತರಿದ್ದರು.

ಸುಕ್ಕ ...