ಭಾರತ, ಏಪ್ರಿಲ್ 26 -- ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್​ ಮತ್ತು 7ನೇ ಸ್ಥಾನಿಯಾದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಏಪ್ರಿಲ್ 26ರಂದು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಡೆಯುವ 44ನೇ ಪಂದ್ಯದಲ್ಲಿ​ ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಲಿದೆ. ಔಟ್ ಆಫ್ ಫಾರ್ಮ್​ ಕೆಕೆಆರ್​ ಸವಾಲು ಎದುರಿಸಲಿರುವ ಪಿಬಿಕೆಎಸ್​ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರ-4ರೊಳಗೆ ಪ್ರವೇಶಿಸಲು ಸಿದ್ಧತೆ ನಡೆಸಿದೆ. ತನ್ನ ಕಳೆದ ಪಂದ್ಯದಲ್ಲಿ ಆರ್​​ಸಿಬಿ ವಿರುದ್ಧ ಮುಗ್ಗರಿಸಿದ್ದ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಗೆದ್ದು ಲಯಕ್ಕೆ ಮರಳಲು ಯೋಜನೆ ಹಾಕಿಕೊಂಡಿದೆ. ಹ್ಯಾಟ್ರಿಕ್ ಸೋಲು ತಪ್ಪಿಸಲು ಮತ್ತು ಪ್ಲೇಆಫ್​​ ಆಸೆ ಜೀವಂತವಾಗಿಟ್ಟುಕೊಳ್ಳಲು ಅಜಿಂಕ್ಯ ರಹಾನೆ ನಾಯಕತ್ವದ ಕೋಲ್ಕತ್ತಾ ಗೆಲ್ಲುವುದು ಅನಿವಾರ್ಯವಾಗಿದೆ.

ಹ್ಯಾಟ್ರಿಕ್ ಸೋಲು, ಪ್ಲೇಆಫ್ ಜೊತೆಗೆ ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳುವುದೂ ಕೆಕೆಆರ್ ಮುಂದಿರುವ ಪ್ರಮುಖ ಗು...