ಭಾರತ, ಏಪ್ರಿಲ್ 26 -- ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ಮತ್ತು 7ನೇ ಸ್ಥಾನಿಯಾದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಏಪ್ರಿಲ್ 26ರಂದು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ನಡೆಯುವ 44ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಲಿದೆ. ಔಟ್ ಆಫ್ ಫಾರ್ಮ್ ಕೆಕೆಆರ್ ಸವಾಲು ಎದುರಿಸಲಿರುವ ಪಿಬಿಕೆಎಸ್ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರ-4ರೊಳಗೆ ಪ್ರವೇಶಿಸಲು ಸಿದ್ಧತೆ ನಡೆಸಿದೆ. ತನ್ನ ಕಳೆದ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಮುಗ್ಗರಿಸಿದ್ದ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಗೆದ್ದು ಲಯಕ್ಕೆ ಮರಳಲು ಯೋಜನೆ ಹಾಕಿಕೊಂಡಿದೆ. ಹ್ಯಾಟ್ರಿಕ್ ಸೋಲು ತಪ್ಪಿಸಲು ಮತ್ತು ಪ್ಲೇಆಫ್ ಆಸೆ ಜೀವಂತವಾಗಿಟ್ಟುಕೊಳ್ಳಲು ಅಜಿಂಕ್ಯ ರಹಾನೆ ನಾಯಕತ್ವದ ಕೋಲ್ಕತ್ತಾ ಗೆಲ್ಲುವುದು ಅನಿವಾರ್ಯವಾಗಿದೆ.
ಹ್ಯಾಟ್ರಿಕ್ ಸೋಲು, ಪ್ಲೇಆಫ್ ಜೊತೆಗೆ ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳುವುದೂ ಕೆಕೆಆರ್ ಮುಂದಿರುವ ಪ್ರಮುಖ ಗು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.