ಭಾರತ, ಏಪ್ರಿಲ್ 22 -- ಐಪಿಎಲ್‌ 18ನೇ ಆವೃತ್ತಿಯಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಎರಡೂ ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಈ ಹಿಂದೆ ಮೊದಲ ಪಂದ್ಯವನ್ನು 1 ವಿಕೆಟ್‌ನಿಂದ ರೋಚಕವಾಗಿ ಗೆದ್ದಿದ್ದ ತಂಡವು, ಎರಡನೇ ಬಾರಿಯ ಮುಖಾಮುಖಿಯಲ್ಲಿ 8 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದು ಬೀಗಿದೆ. ಲಕ್ನೋ ತವರಿನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ತಂಡದ ಸಾಂಘಿಕ ಹೋರಾಟ ಫಲ ಕೊಟ್ಟಿದೆ. ಈ ಗೆಲುವಿನೊಂದಿಗೆ ತಂಡವು ಟೂರ್ನಿಯಲ್ಲಿ 6ನೇ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಭದ್ರಪಡಿಸಿಕೊಂಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಎಲ್‌ಎಸ್‌ಜಿ 6 ವಿಕೆಟ್‌ ಕಳೆದುಕೊಂಡು 159 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ನಡೆಸಿದ ಡೆಲ್ಲಿ, ನಿರ್ಭೀತಿಯಿಂದ ಚೇಸಿಂಗ್‌ ನಡೆಸಿ ಕೇವಲ 17.5 ಓವರ್‌ಗಳಲ್ಲಿ 2 ವಿಕೆಟ್‌ ಮಾತ್ರ ಕಳೆದುಕೊಂಡು ಗೆದ್ದು ಬೀಗಿದೆ.

ಮುಖೇಶ್‌ ಯಾದವ್‌ ನೇತೃತ್ವದಲ್ಲಿ ಅಮೋಘ ಬೌಲಿಂಗ್ ಪ್ರದರ್ಶನದ ನಂತರ, ಬ್ಯಾಟಿಂಗ್‌ನಲ್ಲಿ ಕೆಎಲ್ ರಾಹುಲ್ ಮತ್ತು...