ಭಾರತ, ಮೇ 5 -- ಬೆಂಗಳೂರು: ಗಾಯಕ ಸೋನು ನಿಗಮ್ ಅವರ "ಕನ್ನಡ ಹಾಡು ಮತ್ತು ಪೆಹಲ್ಗಾಮ್" ಹೇಳಿಕೆಗೆ ಸಂಬಂಧಪಟ್ಟಂತೆ ಮಧ್ಯಾಹ್ನ ಒಂದು ಗಂಟೆಗೆ ಬೆಂಗಳೂರಿನ ಫಿಲ್ಮ್ ಚೇಂಬರ್‌ನಲ್ಲಿ ಕನ್ನಡ ಚಿತ್ರರಂಗದ ಅನೇಕ ಸಂಗೀತ ನಿರ್ದೇಶಕರು ಸಭೆ ಸೇರಿ ನಿರ್ಣಯ ಕೈಗೊಳ್ಳಲಿದ್ದಾರೆ. ಇದು ಮುಗಿದ ಬಳಿಕ ಒಂದೂವರೆ ಗಂಟೆಯ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಲಿದ್ದಾರೆ. ಈ ಸಭೆಯಲ್ಲಿ ಸೋನು ನಿಗಮ್ ಕುರಿತು ಕನ್ನಡ ಚಿತ್ರರಂಗ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಖ್ಯಾತ ಗಾಯಕನಿಗೆ ಕನ್ನಡ ಚಿತ್ರರಂಗದಿಂದ ನಿಷೇಧ ಹೇರಳಾಗುವುದೇ ಎಂದು ಕಾದು ನೋಡಬೇಕಿದೆ.
ಇದೇ ಸಮಯದಲ್ಲಿ ಕನ್ನಡಿಗರ ಕನ್ನಡ ಅಭಿಮಾನವನ್ನು ಪೆಹಲ್ಗಾಮ್ ದಾಳಿಗೆ ಹೋಲಿಸಿರುವುದು ಮತ್ತು ಭಯೋತ್ಪಾದನೆಗೆ ಹೋಲಿಸಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಗಾಯಕನ ವಿರುದ್ಧ ದೂರು ನೀಡಲಾಗಿದೆ. ಆದರೆ, ಎಫ್‌ಐಆರ್ ದಾಖಲಾದ ಕುರಿತು ಮಾಹಿತಿ ಲಭ್ಯವಿಲ್ಲ. ಬೆಂಗಳೂರು ಪೊಲೀಸರು ಈ ದೂರುಗಳಿಗೆ ಸಂಬಂಧಪಟ್ಟಂತೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲು ಸಜ್ಜಾಗಿದ್ದಾರೆ. ಪ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.