Chamarajnagar, ಮೇ 11 -- ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಾಥ ಬೆಟ್ಟದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥ ಎಳೆಯಲಾಯಿತು. ಬ್ರಹ್ಮರಥೋತ್ಸವದ ಹಿನ್ನಲೆಯಲ್ಲಿ ದೇವಾಲಯದ ಆವರಣ, ರಥದ ಬೀದಿ, ಕಲ್ಯಾಣಿ ಕೊಳದ ಬಳಿ, ಕಮರಿ ಆವರಣ ಹಾಗೂ ದಾಸೋಹ ಆವರಣ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮತ್ತಿತ್ತರ ಜನನಿಬಿಡ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಕ್ರಮಗಳನ್ನು ಕೈಗೊಂಡಿದ್ದು, ರಥೋತ್ಸವ ಸಿದ್ದತೆಗಳ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಎಚ್ಚರ ವಹಿಸಲಾಗಿತ್ತು.

ಬಿಳಿಗಿರಿ ರಂಗಪ್ಪನನ್ನು ಸೋಲಿಗರು ಭಾವ ಎಂದೇ ಕರೆದು ಆರಾಧಿಸುತ್ತಾರೆ. ಸೋಲಿಗರ ಯುವತಿ ಕುಸುಮಾಲೆಯನ್ನು ರಂಗಪ್ಪ ಮದುವೆಯಾಗಿದ್ದ ಎನ್ನುವ ಐತಿಹ್ಯ ಇರುವುದಿಂದ ಈ ವಿಶೇಷತೆ ಇದೆ.

ಚಾಮರಾಜನಗರ ಮಾತ್ರವಲ್ಲದೇ ಮಂಡ್ಯ.ಮೈಸೂರು ಸೇರಿದಂತೆ ನಾನಾ ಭಾಗದಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸುವುದು ಇಲ್ಲಿನ ವಿಶೇಷ. ಸುಮಾರು 540 ಚದರ ಕಿ.ಮೀ. ವಿಸ್ತಾರವನ್ನು ಹೊಂದಿರುವ ಬಿಳಿಗಿರಿರಂಗನಬೆಟ್ಟವು ಸದಾ ಹಸಿರಿದಿಂದ ಕೂಡಿ ಪ್ರವಾಸಿಗರನ್ನು ತನ್...