ಭಾರತ, ಮೇ 7 -- ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಧರ್ಮದ ಹೆಸರು ಹೇಳಿಕೊಂಡು ಭಾರತೀಯರ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೈನ್ಯ ಅಪರೇಷನ್ ಸಿಂಧೂರ್ ಹೆಸರಿನಲ್ಲಿ ದಾಳಿ ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿರುವ ಹಲವು ಉಗ್ರರ ನೆಲೆಗಳನ್ನು ನಾಶ ಮಾಡಲಾಗಿದೆ. ಆಪರೇಷನ್ ಸಿಂಧೂರ್ ಬಗ್ಗೆ ಭಾರತೀಯರ ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಳ್ಳುತ್ತಿದ್ದಾರೆ.

ಹಲವರು ಪಾಕಿಸ್ತಾನ ದಾಳಿಯ ವಿಡಿಯೊ, ಫೋಟೊಗಳನ್ನು ಹಂಚಿಕೊಂಡು ಭಾರತೀಯ ಸೇನೆಗೆ ಜೈ ಹಿಂದ್ ಹೇಳುತ್ತಿದ್ದರೆ ಇನ್ನೂ ಕೆಲವರು ದ್ವೇಷ ಮರೆತು ಒಂದಾಗಿ ಎಂದು ಪಾಕಿಸ್ತಾನಕ್ಕೆ ಸಲಹೆ ನೀಡುತ್ತಿದ್ದಾರೆ. ಹಲವರು ತಮ್ಮ ಸೋಷಿಯಲ್ ಮಿಡಿಯಾ ಪ್ರೊಫೈಲ್ ಫೋಟೊವನ್ನು ಬದಲಿಸಿ ಆಪರೇಷನ್‌ ಸಿಂಧೂರ್ ಫೋಟೊಗಳನ್ನು ಹಾಕಿಕೊಂಡಿದ್ದಾರೆ. ಸಾಕಷ್ಟು ಜನ ಫೇಸ್‌ಬುಕ್‌, ಟ್ವಿಟರ್, ಇನ್‌ಸ್ಟಾಗ್ರಾಂನಂತಹ ಸೋಷಿಯಲ್ ಮಿಡಿಯಾ ಪುಟಗಳಲ್ಲಿ ಆಪರೇಷನ್ ಸಿಂಧೂರ್‌ ಬಗ್ಗೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಆಪರೇಷನ್ ಸಿಂಧೂರ್‌ಗಾಗಿ ಅಭಿನಂದನೆಗಳು....