Bangalore, ಏಪ್ರಿಲ್ 19 -- ಒಂದೆರಡು ದಿನಗಳ ಹಿಂದೆ kannada hindustantimes ʻʼಕಣ್ಣು ಕಾಣದ ʻಗಾವಿಲʼರಿಂದ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯʼ ಎಂಬ ಲೇಖನ ಪ್ರಕಟಿಸಿತ್ತು. ಅದರಲ್ಲಿ ಗೃಹ ಇಲಾಖೆಯ ಅಂಕಿ-ಅಂಶಗಳನ್ನು ಆಧರಿಸಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯಕ್ಕೆ ಕಾರಣಗಳನ್ನು ಲೇಖಕರು ಅರಸಿದ್ದರು. ಆ ಲೇಖನದ ಆರಂಭದಲ್ಲಿ ಹದಿನೇಳನೇ ಶತಮಾನದ ಸಂಚಿ ಹೊನ್ನಮ್ಮ ಬರೆದ "ಹೆಣ್ಣು ಹೆಣ್ಣೆಂದೇಕೆ ಬೀಳುಗಳೆವರು ಕಣ್ಣು ಕಾಣದ ಗಾವಿಲರು.! ಎಂಬ ಸಾಲನ್ನು ಅವರು ಎತ್ತಿಕೊಂಡಿದ್ದಾರೆ. ಒಟ್ಟಾರೆಯಾಗಿ ಆ ಪದ್ಯದಲ್ಲಿ ನಮ್ಮೆಲ್ಲರನ್ನು ಹಡೆದವಳು ಹೆಣ್ಣಲ್ಲವೆ? ಕಾಪಾಡಿದವಳು ಹೆಣ್ಣಲ್ಲವೆ? ಹೀಗಿರುವಾಗ ಹೆಣ್ಣು ಹೆಣ್ಣು ಎಂದು ಯಾಕೆ ನಿಕೃಷ್ಟರಾಗಿ ಕಾಣುತ್ತಾರೋ ಕಣ್ಣು ಕಾಣದ ಈ ಮೂರ್ಖರು, ಎಂಬ ಮಾತಿನಲ್ಲಿ ಹೊನ್ನಮ್ಮ ಮುಖ್ಯವಾಗಿ ಗಂಡಸರನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಅಷ್ಟೇ ಅಲ್ಲ, ಪರಂಪರಾಗತವಾಗಿ ಹೆಣ್ಣಿನ ಬಗ್ಗೆ ಒಂದು ಬಗೆಯ ಕೀಳು ಭಾವನೆಯನ್ನು ಬೆಳೆಯಿಸಿದ ಮನೋಧರ್ಮವನ್ನು ಹೊನ್ನಮ...