Bengaluru, ಮೇ 15 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 16ರ ಶುಕ್ರವಾರದಿಂದ 22ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಎಲ್ಲರನ್ನು ಸಮಾನ ಭಾವನೆಯಿಂದ ಕಾಣುವಿರಿ. ಆತ್ಮವಿಶ್ವಾಸದಿಂದ ಎದುರಾಗುವ ಸವಾಲುಗಳನ್ನು ಗೆಲ್ಲುತ್ತೀರಿ. ಬೇರೆಯವರ ಮನಸ್ಸನ್ನು ಅರಿತು ಪ್ರೀತಿಯಿಂದ ವರ್ತಿಸುವಿರಿ. ಹಣಕಾಸಿನ ವಿಚಾರದಲ್ಲಿ ಉದಾರಿಗಳಾಗುವಿರಿ. ಇದರಿಂದ ಉತ್ತಮ ಆದಾಯವಿದ್ದರೂ ಹಣದ ಕೊರತೆ ಉಂಟಾಗುತ್ತದೆ. ಆತ್ಮೀಯರಿಗೆ ಸಹಾಯ ಮಾಡುವಿರಿ. ನಿಮ್ಮ ತೀರ್ಮಾನಗಳನ್ನು ಗೌರವಿಸದೆ ...