Bengaluru, ಮೇ 2 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 2 ರ ಶುಕ್ರವಾರದಿಂದ 8ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಸದಾ ಸಿಡುಕಿನಿಂದ ವರ್ತಿಸುವಿರಿ. ಇದರಿಂದ ನಿಮ್ಮ ಕೆಲಸಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಹಣಕಾಸಿನ ತೊಂದರೆ ಇರುವ ಕಾರಣ ಖಿನ್ನತೆಯಿಂದ ಬಳಲುವಿರಿ. ಉದ್ಯೋಗದಲ್ಲಿ ನಿಮ್ಮ ಕೆಲಸದಲ್ಲಿ ಬೇರೆಯವರ ಹಸ್ತಕ್ಷೇಪ ಇರುತ್ತದೆ. ಕುಟುಂಬದಲ್ಲಿ ಪರಸ್ಪರ ಉತ್ತಮ ಮನೋಭಾವನೆ ಇರುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಬಂಡವಾಳದ ಅವಶ್ಯಕತೆ ಇರ...