ಭಾರತ, ಫೆಬ್ರವರಿ 14 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರವರಿ 14ರ ಶುಕ್ರವಾರದಿಂದ 20ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಕೋಪ ಬರುವುದಿಲ್ಲ. ಆದರೆ ಕೋಪ ಬಂದಲ್ಲಿ ಉದ್ವೇಗದಿಂದ ವರ್ತಿಸುವಿರಿ. ಪ್ರತಿಯೊಂದು ವಿಚಾರಗಳಲ್ಲಿ ತಪ್ಪನ್ನು ಕಂಡುಹಿಡಿಯುವಿರಿ. ಇದರಿಂದಾಗಿ ಮಾನಸಿಕ ಒತ್ತಡಲಿಕ್ಕೆ ಒಳಗಾಗುವಿರಿ. ಉದ್ಯೋಗದಲ್ಲಿ ಅಧಿಕಾರಿಗಳ ಜೊತೆಯಲ್ಲಿ ವಾದ ವಿವಾದವಿರುತ್ತದೆ. ದಿನ ಕಳೆದಂತೆ ಸಹಜ ಸ್ಥಿತಿಗೆ ಮರಳುವಿರಿ. ರಕ್ತಕ್ಕೆ ...