Bengaluru, ಮಾರ್ಚ್ 27 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 28 ರ ಶುಕ್ರವಾರದಿಂದ ಏಪ್ರಿಲ್ 3ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಗೆಲ್ಲಲೇ ಬೇಕೆಂಬ ಹಠ ನಿಮ್ಮಲ್ಲಿ ಇರುತ್ತದೆ. ಇದರಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಸ್ವಂತ ಉದ್ಯಮ ಆರಂಭಿಸುವಿರಿ. ದುಡುಕದೆ ಆತ್ಮವಿಶ್ವಾಸದಿಂದ ಪ್ರತಿ ಕೆಲಸದಲ್ಲಿಯೂ ಯಶಸ್ಸನ್ನು ಗಳಿಸುವಿರಿ. ಮನೆತನಕ್ಕೆ ಸೇರಿದ ವೃತ್ತಿಯನ್ನು ಮಾಡುವಿರಿ. ದೃಢವಾದ ನಿರ್ಧಾರದ ಕಾರಣ ಉತ್ತಮ ಆದಾಯ ...