Bengaluru, ಮೇ 2 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 2 ರ ಶುಕ್ರವಾರದಿಂದ 8ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಹಳೆಯ ನೆನಪುಗಳು ನಿಮ್ಮ ಬೇಸರಕ್ಕೆ ಕಾರಣವಾಗಲಿವೆ. ಪ್ರಯೋಜನವಿಲ್ಲದ ವಿಚಾರಗಳಿಗೆ ಯೋಚನೆ ಮಾಡುವಿರಿ. ಇದರಿಂದ ಅನಾರೋಗ್ಯ ಉಂಟಾಗಲಿದೆ. ಮುಖ್ಯವಾಗಿ ಅಜೀರ್ಣದಿಂದ ಬಳಲುವಿರಿ. ಅವಿರತ ಮತ್ತು ಶ್ರಮದಾಯಕ ಕೆಲಸದ ನಡುವೆ ವಿಶ್ರಾಂತಿಯನ್ನು ಬಯಸುವಿರಿ. ನಿಮ್ಮ ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವಿರಿ....