Bengaluru, ಜೂನ್ 12 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 13 ರ ಶುಕ್ರವಾರದಿಂದ 19ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಆತುರದ ಸ್ವಭಾವ ಇರುತ್ತದೆ, ಸಮಯಕ್ಕೆ ತಕ್ಕಂತೆ ಹೊಂದಿಕೊಂಡು ಬಾಳುವಿರಿ. ನಿಮ್ಮಲ್ಲಿ ವಿಶೇಷವಾದ ಬುದ್ಧಿ ಚಾತುರ್ಯ ಇರುತ್ತದೆ. ನಿಮ್ಮಲ್ಲಿನ ಕೋಪವನ್ನು ಮರೆಮಾಚಿ ಶಾಂತಿಯಿಂದ ವರ್ತಿಸುವಿರಿ. ಆತುರ ತೋರದೆ ಬುದ್ಧಿವಂತಿಕೆಯಿಂದ ಕುಟುಂಬದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಿರಿ. ತಪ್ಪು ಕಲ್ಪನೆಯಿಂದ ಸ್ವಂತ ಕೆಲಸ ಕಾರ್ಯಗಳನ್ನು ಮುಂದೂಡುವಿರಿ. ...