ಭಾರತ, ಮಾರ್ಚ್ 13 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 14 ರ ಶುಕ್ರವಾರದಿಂದ 20ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಉತ್ತಮ ಆರೋಗ್ಯವಿರುತ್ತದೆ. ಪರಿಸ್ಥಿತಿಯ ಒತ್ತಡಕ್ಕೆ ಮಣಿದು ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮಕ್ಕಳ ಆರೋಗ್ಯದಲ್ಲಿ ಏರಿಳಿತ ಇರುತ್ತದೆ. ನಿಮಗೆ ವಿಶೇಷವಾದಂತಹ ಯೋಚನೆ ಶಕ್ತಿ ಇರುತ್ತದೆ. ಕಿರು ಪ್ರವಾಸಗಳಿಗೆ ತೆರಳುವಿರಿ. ಉದ್ಯೋಗಸ್ಥರಿಗೆ ಉತ್ತಮ ಆದಾಯವಿದ್ದರೂ ಹಣ ಉಳಿತಾಯ ಮಾಡಲು ಸಾಧ್ಯವಾಗುವುದ...