Bengaluru, ಜೂನ್ 5 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 6 ಶುಕ್ರವಾರದಿಂದ 12ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಉದ್ಯೋಗದ ಸಲುವಾಗಿ ದೂರದ ಸ್ಥಳಕ್ಕೆ ತೆರಳುವಿರಿ. ಮಕ್ಕಳಿಗೆ ಆತ್ಮೀಯರ ಸಹಾಯದಿಂದ ತಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ. ತಂದೆಯವರು ಕೋಪದಿಂದ ನಿಮ್ಮ ಬಗ್ಗೆ ತಪ್ಪು ಅಭಿಪ್ರಾಯಕ್ಕೆ ಬರುತ್ತಾರೆ. ಸೋದರ ಅಥವಾ ಸೋದರಿಯರು ನಿಮಗೆ ಸಹಾಯ ಮಾಡುತ್ತಾರೆ. ಆರಂಭದಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಅಡ್ಡಿ ಆತಂಕ ಉಂಟಾದರೂ ಕ್ರಮೇಣವಾಗಿ ಸರಿದಾರಿಗೆ ಮರಳ...