Bengaluru, ಜೂನ್ 12 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 13 ರ ಶುಕ್ರವಾರದಿಂದ 19ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಹಠ ಮತ್ತು ಆತ್ಮವಿಶ್ವಾಸ ತಪ್ಪು ನಿರ್ಧಾರಗಳಿಗೆ ಕಾರಣವಾಗುತ್ತದೆ. ದುಡುಕಿನ ಬುದ್ಧಿಯಿಂದಾಗಿ ಕುಟುಂಬದಲ್ಲಿ ಬೇಸರ ನೆಲೆಸುತ್ತದೆ. ಪತಿಯು ಸಂದಿಗ್ಧ ಪರಿಸ್ಥಿತಿಯಲ್ಲಿ ಸಹಾಯ ಮಾಡುವಿರಿ. ಹಣದ ತೊಂದರೆ ಉಂಟಾದಲ್ಲಿ ಒತ್ತಡಕ್ಕೆ ಒಳಗಾಗುವಿರಿ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಉದ್ಯೋಗಸ್ಥರಿಗೆ ನಿರೀಕ್ಷಿತ ಸ್ಥಾನ ಮಾನ ದೊರೆಯುತ್ತದೆ. ನೀವು ...