Bengaluru, ಮೇ 8 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 9 ರ ಶುಕ್ರವಾರದಿಂದ 15ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಯಾವುದೇ ವಿಚಾರವನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ನಂಬಿದವರಿಗೆ ಎಲ್ಲಾ ರೀತಿಯ ಸಹಾಯ ಸಹಕಾರ ನೀಡುವಿರಿ. ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪುವಿರಿ. ಉತ್ತಮ ಅವಕಾಶ ದೊರೆತರೂ ಉದ್ಯೋಗವನ್ನು ಬದಲಿಸುವುದಿಲ್ಲ. ನಿಮ್ಮ ಧೈರ್ಯದ ಗುಣಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಕುಟುಂಬದಲ್ಲಿ ನಿಮ್ಮಿಂದಾಗಿ ಶಾಂತಿ ನೆಮ್ಮದಿ ನೆಲೆಸು...