ಭಾರತ, ಏಪ್ರಿಲ್ 11 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 11 ರ ಶುಕ್ರವಾರದಿಂದ ಏಪ್ರಿಲ್ 17ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಉತ್ತಮ ಆದಾಯವಿದ್ದರೂ ಕುಟುಂಬದಲ್ಲಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗುತ್ತವೆ. ಹಣಕಾಸಿನ ನಿರ್ವಹಣೆಯ ಜವಾಬ್ದಾರಿಯು ನಿಮ್ಮದಾಗುತ್ತದೆ. ಉದ್ಯೋಗಸ್ಥರಿಗೆ ಸಹೋದ್ಯೋಗಿಗಳ ಸಹಕಾರ ದೊರೆಯುವುದಿಲ್ಲ. ಹಠದ ಗುಣದಿಂದ ತಮ್ಮ ಗುರಿಯನ್ನು ಸುಲಭವಾಗಿ ತಲುಪುತ್ತಾರೆ. ಬಂಧು-ಬಳಗದವರಿಂದ ದೂರ ಉಳಿಯ...