ಭಾರತ, ಮೇ 30 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 30 ರ ಶುಕ್ರವಾರದಿಂದ ಜೂನ್‌ ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಮನಸ್ಸಿನಲ್ಲಿ ತಪ್ಪು ಕಲ್ಪನೆ ಇರುತ್ತದೆ. ಕುಟುಂಬದ ಸಮಸ್ಯೆಯು ಕ್ರಮೇಣವಾಗಿ ದೂರವಾಗುತ್ತದೆ. ಹೊಸ ವಾಹನವನ್ನು ಕೊಳ್ಳುವಿರಿ. ಉದರವ್ಯಾಧಿ ಇರುತ್ತದೆ. ದೈವಿಕ ಕಾರ್ಯದಲ್ಲಿ ಹೆಚ್ಚಿನ ನಂಬಿಕೆ ಮತ್ತು ಆಸಕ್ತಿ ಇರುತ್ತದೆ. ಮನಸ್ಸಿನಲ್ಲಿ ವೈರಾಗ್ಯದ ಭಾವನೆ ಇರುತ್ತದೆ. ಪತಿಯ ಜೊತೆಯಲ್ಲಿ ಅನಾವಶ್ಯಕವಾದ ವಾದ ವಿವಾದಗಳು ಇರುತ್ತವೆ. ಸಾಂಪ್ರದ...