ಭಾರತ, ಫೆಬ್ರವರಿ 27 -- ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಕೇಳಿ ಬಂದಿರುವ ಮೂಡಾ ಹಗರಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಗಂಗರಾಜು ಹಾಗೂ ಇತರ ಮೂವರ ಫೋಟೋಗಳಿಗೆ ವಾಮಾಚಾರ ಮಾಡಿ ಪ್ರಾಣಿ ಬಲಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಳಿಗೆ ಶ್ರೀರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿ ಪೊಲೀಸ್ ಅಧಿಕಾರಿ ಸಹಕಾರ ನೀಡುತ್ತಿಲ್ಲ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು ವಾಮಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ರಾಮಸೇನಾ ಸಂಸ್ಥಾಪಕ ಪ್ರಸಾದ್‌ ಅತ್ತಾವರ ಮತ್ತು ಆತನ ಪತ್ನಿಯಾಗಿರುವ ಉಡುಪಿಯ ಸಬ್‌ ಇನ್‌ಸ್ಪೆಕ್ಟರ್‌ಗೆ ಎರಡು ಬಾರಿ ನೋಟೀಸ್‌ ನೀಡಲಾಗಿದೆ. ಆದರೆ ಅವರಿಬ್ಬರೂ ಕೂಡ ತನಿಖೆಗೆ ಸಹಕರಿಸುತ್ತಿಲ್ಲ. ಇನ್ನೊಂದು ನೋಟಿಸ್‌ ನೀಡಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.

ಜ.23ರಂದು ಮಂಗಳೂರಿನ ಕಲರ್ಸ್ ಯೂನಿಸೆಕ್ಸ್‌ ಸಲೂನ್‌ ಮೇಲೆ ಅ...