ಭಾರತ, ಮಾರ್ಚ್ 9 -- ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿದೆ. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತು. ನ್ಯೂಜಿಲೆಂಡ್ ಪರ ಡ್ಯಾರಿಲ್ ಮಿಚೆಲ್ 61 ರನ್ ಗಳಿಸಿ ಅತ್ಯಧಿಕ ಸ್ಕೋರ್ ಗಳಿಸಿದರು. ಅವರನ್ನು ಹೊರತುಪಡಿಸಿ, ರಾಚಿನ್ 37 ಮತ್ತು ಬ್ರೇಸ್‌ವೆಲ್ 41 ರನ್ ಗಳಿಸಿದರು. ಭಾರತ ತಂಡದ ಪರ ವರುಣ್ ಚಕ್ರವರ್ತಿ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಪಡೆದು ಮಿಂಚಿದರು. 3ನೇ ಬಾರಿಗೆ ಚಾಂಪಿಯನ್ ಆಗಲು ಭಾರತಕ್ಕೆ 252 ರನ್‌ಗಳ ಅವಶ್ಯಕತೆಯಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕರಾದ ವಿಲ್ ಯಂಗ್ ಮತ್ತು ರಾಚಿನ್ ರವೀಂದ್ರ ಉತ್ತಮ ಆರಂಭ ನೀಡಿದರು. ಇವರಿಬ್ಬರ ನಡುವೆ 57 ರನ್‌ಗಳ ಪಾಲುದಾರಿಕೆ ಇತ್ತು. ಆದರೆ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ವರುಣ್ ಚಕ್ರವರ್ತಿ ಯಶಸ್ವಿಯಾದರು. ಆ ಮೂಲಕ ಭಾರತಕ್ಕೆ ಮೊದಲ ಯಶಸ್ಸನ್ನು ತಂದುಕೊಟ್ಟರು. ಯಂಗ್ (15) ಅವರನ್ನು ಎಲ್​...