ಭಾರತ, ಮಾರ್ಚ್ 26 -- Smart Meter Tender Scam: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ಮತ್ತು ಇತರ ವಿದ್ಯುತ್ ಸರಬರಾಜು ಕಂಪನಿಗಳ (ESCOMS) ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ಸುಮಾರು 15,568 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ ಡಾ ಸಿಎನ್ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.

ಟೆಂಡರ್ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಕ್ಷಪಾತ ಮಾಡಿದೆ ಮತ್ತು ಅಕ್ರಮ ಎಸಗಿದೆ ಎಂದು ಆರೋಪ ಮಾಡಿರುವ ಶಾಸಕರು ಈ ಇದರಲ್ಲಿ ಬಹುಕೋಟಿ ಅವ್ಯವಹಾರ ನಡೆದಿದೆ ಎಂದಿದ್ದಾರೆ. ಎಸ್ಕಾಂಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನಿಯಮಗಳನ್ನು ಪಾಲಿಸಬೇಕು ಎಂದು ಅವರು ಒತ್ತಿ ಹೇಳಿದರು.

ಸ್ಮಾರ್ಟ್ ಮೀಟರ್‌ಗಳ ಅಳವಡಿಕೆಯಲ್ಲಿನ ಅಕ್ರಮಗಳ ಆರೋಪವನ್ನು ಇಂಧನ ಇಲಾಖೆ ತಳ್ಳಿಹಾಕಿದ ಒಂದು ದಿನದ ನಂತರ ಮಾಜಿ ಉಪಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡಿದ್ದಾರೆ. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ 'ಸ್ಮಾರ್ಟ್ ಮೀಟರ್ ಖರೀದಿ ಬೆಲೆಯನ್ನು ವೈಜ್ಞಾನಿಕವಾಗ...