ಭಾರತ, ಏಪ್ರಿಲ್ 14 -- ಕೋಣ, ಕುಪ್ಪಂಡ ಪ್ರೊಡಕ್ಷನ್ ಚೊಚ್ಚಲ ಪ್ರಯತ್ನ. ಈ ಬ್ಯಾನರ್ ಮೂಲಕ ಬಿಗ್ ಬಾಸ್ ಕನ್ನಡ ಸೀಸನ್ 10ರ ಖ್ಯಾತಿಯ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಲ್ಪ ಹಾಗೂ ರವಿ ಕಿರಣ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ನೈಜ ಘಟನೆ ಆಧರಿಸಿದ ಸಿನಿಮಾ ಎಂಬ ಕಾರಣಕ್ಕೆ ಕೋಣ ಹೆಚ್ಚು ಕುತೂಹಲ ಮೂಡಿಸಿದೆ. ಎಸ್ ಹರಿಕೃಷ್ಣ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಈ ಕಥೆಯಲ್ಲಿ ಕೋಮಲ್ ಹೀರೋ ಅನ್ನೋದು ಒಂದು ಕಡೆಯಾದ್ರೆ, ಕೋಣ ಈ ಚಿತ್ರದ ಮತ್ತೊಬ್ಬ ಹೀರೋ ಎಂದು ಚಿತ್ರತಂಡ ಈ ಹಿಂದೆಯೇ ಹೇಳಿತ್ತು.
ಅದರಂತೆ ಇದೀಗ ಇದೇ ಸಿನಿಮಾದ ನಾಯಕಿ ಯಾರು? ಈ ವಿಚಾರ ಇಲ್ಲಿಯವರೆಗೂ ರಿವೀಲ್ ಆಗಿರಲಿಲ್ಲ. ಇದೀಗ ಅದೂ ಬಹಿರಂಗವಾಗಿದೆ.
ಸ್ಯಾಂಡಲ್‌ವುಡ್‌ನಲ್ಲಿ ಬಾಲನಟಿಯಾಗಿ ಗುರುತಿಸಿಕೊಂಡಿದ್ದ ಮತ್ತು ಕನ್ನಡ ಕಿರುತೆರೆಯಲ್ಲಿಯೂ ಗಮನ ಸೆಳೆದ ನಟಿ ನಮ್ರತಾ ಗೌಡ, ಕೋಣ ಚಿತ್ರಕ್ಕೆ ನಾಯಕಿಯಾಗಿದ್ದಾರೆ.
ನಮ್ರತಾ ಗೌಡ ಅವರ ಬರ್ತ್‌ಡೇ ಪ್ರಯುಕ್ತ ನಿರ್ಮಾಪಕಿ ತನಿಷಾ ಕುಪ್ಪಂಡ, ನಾಯಕಿಯ ಫಸ್ಟ್ ಲುಕ್ ರಿವೀಲ್ ಮಾಡಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.