Benagluru, ಮಾರ್ಚ್ 13 -- ತಮ್ಮ ಹಾಡುಗಳ ಮೂಲಕ ಜನಪ್ರಿಯರಾಗಿರುವ ಗೀತರಚನೆಕಾರ ಹಾಗೂ ಲವ್ ಇನ್ ಮಂಡ್ಯ ಚಿತ್ರದ ನಿರ್ದೇಶಕ ಅರಸು ಅಂತಾರೆ ನಿರ್ದೇಶನಕ್ಕೆ ಇಳಿದಿದ್ದಾರೆ. ಈ ಚಿತ್ರದ ನಾಯಕ ನಟನಾಗಿ ಗೋಲ್ಡನ್ ಸ್ಟಾರ್ ಗಣೇಶ್ ನಟಿಸುತ್ತಿದ್ದಾರೆ.

ನಟ ಗಣೇಶ್‌ ಸದ್ಯ ಸಾಲು ಸಾಲು ಸಿನಿಮಾ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ. ಅವರ ಬಹುಕೋಟಿ ವೆಚ್ಚದ ಸಿನಿಮಾಗಳು ನಿರ್ಮಾಣ ಹಂತದಲ್ಲಿವೆ. ಇದೀಗ ಅರಸು ಅಂತಾರೆ ನಿರ್ದೇಶನದ ಹೊಸ ಸಿನಿಮಾಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.

ತೆಲುಗಿನ "ಹನುಮಾನ್" ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅಮೃತ ಅಯ್ಯರ್ ಸ್ಯಾಂಡಲ್‌ವುಡ್ ಪ್ರವೇಶಿಸುತ್ತಿದ್ದಾರೆ.

ಎಸ್‌ಎನ್‌ಟಿ ಎಂಟರ್ಪ್ರೈಸಸ್ ಬ್ಯಾನರ್‌ನಲ್ಲಿ ರವಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿದೆ. ಅರಸು ಅಂತಾರೆ ಅವರ ಚಿತ್ರಕಥೆಗೆ ಮಹೇಶ್ ದೇವ್ ಡಿ ಎನ್ ಪುರ ಹಾಗೂ ಸಂಭಾಷಣೆಗೆ ಕ್ರಾಂತಿ ಕುಮಾರ್ ಹಾಗ...