ಭಾರತ, ಮಾರ್ಚ್ 9 -- ಬೆಂಗಳೂರು: ಕರ್ನಾಟಕ ಹಂಪಿಯಲ್ಲಿ ಇಸ್ರೇಲ್‌ ಪ್ರಜೆ ಸೇರಿ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ ಪ್ರಕರಣವನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದೆ ಎಂದು ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಮಾರ್ಚ್ 8) ಈ ಬಗ್ಗೆ ಹೇಳಿಕೆ ನೀಡಿದ್ದು, ಹಂಪಿ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದರು.

ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಹಂಪಿ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಿದ್ದು, "ನಾವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕಳುಹಿಸಿದ್ದೇವೆ. ಈಗಾಗಲೇ ಅನೇಕರನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಪ್ರಕರಣದ ತನಿಖೆಗಾಗಿ ಪೊಲೀಸರ ತಂಡಗಳನ್ನು ರಚಿಸಲಿದ್ಧಾರೆ. ಪೊಲೀಸ್ ಮಹಾ ನಿರ್ದೇಶಕರೂ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರವಾಸಿಗರ ಸು...